ಹಿಜಾಬ್ ವಿವಾದ; ಕರ್ನಾಟಕ ಸರಕಾರಕ್ಕೆ ನೊಟೀಸ್, ಇಂದು ಸುಪ್ರೀಂಕೋರ್ಟ್ ನಲ್ಲಿ ಏನೆಲ್ಲಾ ಬೆಳವಣಿಗೆ ನಡೆದಿದೆ?

ನವದೆಹಲಿ;ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಇದರ ಜೊತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮುಂದಿನ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

ಹಿಜಾಬ್ ವಿವಾದದ ಕುರಿತ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ,ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ.ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ,ಕರ್ನಾಟಕಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಬಳಿಕ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

ಟಾಪ್ ನ್ಯೂಸ್