ಹಿಜಾಬ್ ಧರಿಸದಂತೆ ವಿದ್ಯಾರ್ಥಿನಿಯರಿಗೆ ಸೂಚನೆ; ಪಾಂಶುಪಾಲೆ & ಶಿಕ್ಷಕಿ ವಿರುದ್ಧ ಕೇಸ್ ದಾಖಲು
ಹೈದರಾಬಾದ್:10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಪ್ರಾಂಶುಪಾಲರು ಮತ್ತು ಶಿಕ್ಷಕರು ಸೂಚಿಸಿದ ಹಿನ್ನೆಲೆಯಲ್ಲಿ ಹಯತ್‌ನಗರದ ಖಾಸಗಿ ಶಾಲೆಯೊಂದರ ಪ್ರಾಂಶುಪಾಲೆ & ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ.
ಹಯಾತ್‌ನಗರದ ಝೀ ಶಾಲೆಯಲ್ಲಿ 10ನೇ ತರಗತಿಯಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶೈಕ್ಷಣಿಕ ವರ್ಷದ ತರಗತಿಗಳು ಜೂನ್ 12 ರಂದು ಪ್ರಾರಂಭವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಿ ಶಾಲೆಗೆ ಬರುತ್ತಿದ್ದರು.
ದೂರಿನ ಪ್ರಕಾರ, ಪ್ರಾಂಶುಪಾಲರು ಮತ್ತು ಶಿಕ್ಷಕರು ತರಗತಿಯಲ್ಲಿ ಸ್ಕಾರ್ಫ್ ಧರಿಸದಂತೆ ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸದಂತೆ ಗದರಿಸಲಾಗಿದೆ.ಈ ಬಗ್ಗೆ ವಿದ್ಯಾರ್ಥಿಯೊಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಯಾತ್ ನಗರ ಠಾಣೆಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಪ್ರಾಂಶುಪಾಲರಾದ ಪೂರ್ಣಿಮಾ ಶ್ರೀವಾಸ್ತವ್ ಮತ್ತು ಶಿಕ್ಷಕಿ ಮಾಧುರಿ ಕವಿತಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೆಕ್ಷನ್ 153 ಎ, 295, 292 ಮತ್ತು ಇತರ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.