ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು; ವಿಡಿಯೋ ವೈರಲ್…

ಔರಂಗಾಬಾದ್‌; ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಕೈ ಗೇಟ್ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೊ ವೈರಲ್ ಆಗಿದೆ.

ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ವಿಡಿಯೊ ಪ್ರಕಾರ ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ.ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು.ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ.

ಈ ಯುವಕರ ಗುಂಪು ಆಕೆಯನ್ನು ಕೆಟ್ಟ ಮಾತುಗಳಿಂದ ನಿಂದಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.ಪೊಲೀಸರು ವಿಡಿಯೊ ನೋಡಿ ಮಹಿಳೆಯನ್ನು ಗುರುತಿಸಿ ದೂರು ದಾಖಲಿಸುವಂತೆ ತಿಳಿಸಿದ್ದಾರೆ. ಆದರೆ ಆಕೆ ದೂರು ನೀಡಲು ನಿರಾಕರಿಸಿದ್ದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ಈಗಾಗಲೇ ಘಟನೆಯಲ್ಲಿ ಭಾಗಿಯಾಗಿರುವ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ದೀಪಕ್ ಗಿರ್ಹೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com