ಮಹಿಳಾ ಆಧಿಕಾರಿಗಳು ಸೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಕೆಡವಿರುವ ಘಟನೆ ನಡೆದಿದೆ.
ಮಧ್ಯಪ್ರದೇಶ;ಮಹಿಳಾ ಆಧಿಕಾರಿಗಳು ಸೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಧ್ವಂಸಗೊಳಿಸಿದ ಘಟನೆ ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಡೆದಿದೆ.
ಕೌಶಲ್ ಕೆ.ಚೌಬೆ ಎಂಬ ವ್ಯಕ್ತಿಗೆ ಸೇರಿದ ಮನೆಯನ್ನು ಕೆಡವಲಾಗಿದೆ.ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಓರ್ವನಾಗಿದ್ದ.
ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಪ್ರಶಿತಾ ಕುರ್ಮಿ ಈ ಕುರಿತು ಪ್ರತಿಕ್ರಿಯಿಸಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗುವವರಲ್ಲಿ ಭಯ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಹಿಳಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲ್ಡೋಜರ್ ಬಳಸಿ ಆರೋಪಿಯ ಮನೆ ಧ್ವಂಸಗೊಳಿಸಿದ್ದಾರೆ.