ನಾಗಪುರದಿಂದ ಬಂದಿದೆ ನೂರಾರು ಮಂದಿಯ ತಂಡ? ಜಗದೀಶ್ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: ನಾಗಪುರದಿಂದ ಶೆಟ್ಟರ್ ಗೆ ಸೋಲಿಸಲು ಹುಬ್ಬಳ್ಳಿಗೆ ಆರೆಸ್ಸೆಸ್ ತಂಡ ಬಂದಿದೆ ಎಂದು ಹೇಳಲಾಗಿದೆ.ಈ ಬಗ್ಗೆ ಮಾಜಿ ಸಿಎಂ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ನಾಗಪುರದಿಂದ ಯಾರೇ ಬಂದರೂ ಅವರಿಂದ ಯಶಸ್ವಿ ಚುನಾವಣೆ ಮಾಡಲು ಆಗುವುದಿಲ್ಲ. ಸ್ಥಳೀಯವಾಗಿ ನಮಗೆ ಗುರುತಿರುತ್ತೆ, ಹೊರಗಿನಿಂದ ಬಂದವರಿಗೆ ಎಲ್ಲಾ ಮಾಹಿತಿ ಇರುವುದಿಲ್ಲ. ತಿಳಿದುಕೊಳ್ಳುವಷ್ಟರಲ್ಲಿ ಚುನಾವಣೆ ಮುಗಿದಿರುತ್ತೆ, ಅನುಭವದಲ್ಲಿ ಇದನ್ನೆಲ್ಲಾ ನೋಡಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಗಪುರದಿಂದ ನೂರಾರು ಜನರ ತಂಡ ಬಂದಿದೆ ಎಂದು ಹೇಳ್ತಾರೆ ಆದರೆ ನಾನು ನೋಡಿಲ್ಲ. ಅಕಸ್ಮಾತ್ ಬಂದಿದ್ರೆ ನಾನೊಂದು ಹೇಳುತ್ತೇನೆ. ಇತ್ತೀಚೆಗೆ ನಾಗಪುರದಲ್ಲಿ ಪದವೀಧರರ ಕ್ಷೇತ್ರದ ಚುನಾವಣೆ ನಡೆಯಿತು, ಇಷ್ಟೆಲ್ಲಾ ಎಕ್ಸ್‌ಪರ್ಟ್ ಇರುವವರು ನಾಗಪುರದ ಪದವೀಧರರ ಚುನಾವಣೆಯಲ್ಲಿ ಯಾಕೆ ಸೋತರು ತಿಳಿಸಲಿ ಎಂದ ಅವರು, ನಾನು ಕಾನೂನುಬಾಹಿರ ಕೆಲಸ ಮಾಡಲ್ಲ, ನನ್ನ ಚಲನವಲನದ ಮೇಲೆ ಏನು ನಿಗಾ ಇಡುತ್ತಾರೆ ಎಂದು ಪ್ರಶ್ನಿಸಿದರು.

ಕೂಡಲಸಂಗಮಕ್ಕೆ ಹೋಗುವ ಮಾರ್ಗಮಧ್ಯ ಪಕ್ಷದ ವರಿಷ್ಠ ರಾಹುಲ್ ಹುಬ್ಬಳ್ಳಿಗೆ ಬಂದಿದ್ದರು. ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿರುವ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಲಿಂಗಾಯತರಿಗೆ ಎಲ್ಲ ಸ್ಥಾನಮಾನ ನೀಡಿದೆ. ಈ ಬಾರೀ ಚುನಾವಣೆಯಲ್ಲಿ ಸಮಾಜದ 50ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಾನಗಲ್ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ಹುಬ್ಬಳ್ಳಿ, ಧಾರವಾಡದಲ್ಲೂ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ನನಗೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರಕ್ಕಾಗಿ ಆಹ್ವಾನಿಸುತ್ತಿದ್ದಾರೆ ಎಂದಿ ಶೆಟ್ಟರ್ ಇದೇ ವೇಳೆ ಹೇಳಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com