ಮಹಾರಾಷ್ಟ್ರ;ಹೋಟೆಲ್‌ನಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿಯೋರ್ವರು ಮೃತಪಟ್ಟಿದ್ದಾರೆ.
57 ವರ್ಷದ ಐಎಎಸ್ ಅಧಿಕಾರಿ ಪ್ರಶಾಂತ್ ದತ್ತಾತ್ರೇಯ
ಪಿಡಬ್ಲ್ಯೂಡಿ ಕಾರ್ಯದರ್ಶಿಯಾಗಿದ್ದು, ನೆರೆಹೊರೆಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ರಾತ್ರಿ ಊಟ ಮಾಡುವಾಗ ಅಧಿಕಾರಿ ನವಘರೆ ಅವರಿಗೆ ಅಲರ್ಜಿಯ ಲಕ್ಷಣಗಳು ಕಂಡು ಬಂದು ತಕ್ಷಣವೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾತಾ ರಮಾಬಾಯಿ ಅಂಬೇಡ್ಕರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.