ಮದುವೆ ಸಮಾರಂಭದಲ್ಲೇ ವಿಷ ಕುಡಿದ ವಧು- ವರ; ವರ ಸಾವು, ವಧುವಿನ ಸ್ಥಿತಿ ಗಂಭೀರ, ಶಾಕಿಂಗ್ ಘಟನೆ ವರದಿ..

ಮದುವೆ ಸಮಾರಂಭದಲ್ಲೇ ವಿಷ ಕುಡಿದ ವಧು- ವರ; ವರ ಸಾವು, ವಧುವಿನ ಸ್ಥಿತಿ ಗಂಭೀರ, ಶಾಕಿಂಗ್ ಘಟನೆ ವರದಿ..

ಮಧ್ಯಪ್ರದೇಶ;ವಿವಾಹ ಸಮಾರಂಭದಲ್ಲಿ ವಧು-ವರನ ನಡುವೆ ವಾಗ್ವಾದ ನಡೆದು, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿರುವ ಘಟನೆ ಇಂದೋರ್ ನಗರದಲ್ಲಿ ನಡೆದಿದೆ.

ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರಾದೃಷ್ಟವಶಾತ್‌ ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾನೆ. ವಧು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರನು ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ. ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ.

ವರನ ಕುಟುಂಬ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಕಳೆದ ಹಲವು ದಿನಗಳಿಂದ ಮಹಿಳೆ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಮತ್ತು ವರ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com