ಇಂಡಿಯಾ ಟುಡೇ ಸೇರಿ ಮೂರು ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ; ಸಮೀಕ್ಷೆ ಪ್ರಕಾರ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನಗಳು? ಇಲ್ಲಿದೆ ಮಾಹಿತಿ..

ಬೆಂಗಳೂರು; ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ ಸಮೀಕ್ಷೆಗಳು ಹೇಳಿವೆ.

ಇಂಡಿಯಾ ಟುಡೇ ಸಮೀಕ್ಷೆ
ಕಾಂಗ್ರೆಸ್‌: 122-140
ಬಿಜೆಪಿ: 62-80
ಜೆಡಿಎಸ್‌: 20-25
ಇತರರು: 0-3

ಟುಡೇಸ್‌ ಚಾಣಕ್ಯ ಸಮೀಕ್ಷೆ
ಕಾಂಗ್ರೆಸ್‌: 120
ಬಿಜೆಪಿ: 92
ಜೆಡಿಎಸ್‌: 12
ಇತರರು: 3

ಈಗಾಗಲೇ ಒಟ್ಟು 3 ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಗುವ ಬಗ್ಗೆ ಸೂಚಿಸಲಾಗಿದೆ. ಇದಲ್ಲದೆ ನಾಲ್ಕು ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಬಗ್ಗೆ ಹೇಳಲಾಗಿದೆ.

224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ. ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ.

ರಾಜ್ಯದ ಆಡಳಿತಾರೂಢ ಬಿಜೆಪಿ 224 ವಿಧಾನಸಭಾ ಸ್ಥಾನಗಳಲ್ಲಿ 85-100, ಕಾಂಗ್ರೆಸ್ 94-108 ಮತ್ತು ಜೆಡಿಎಸ್ 24-32 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಭವಿಷ್ಯ ನುಡಿದಿದೆ.

TV 9-Bharatvansh-Polstrat ಬಿಜೆಪಿಗೆ 88-98 ಸ್ಥಾನಗಳು, ಕಾಂಗ್ರೆಸ್‌ಗೆ 99-109 ಸ್ಥಾನಗಳು ಮತ್ತು ಜೆಡಿಎಸ್‌ಗೆ 21-26 ಸ್ಥಾನಗಳನ್ನು ಭವಿಷ್ಯ ನುಡಿದಿದೆ.

ಝೀ ನ್ಯೂಸ್ ಮ್ಯಾಟ್ರಿಜ್ ಬಿಜೆಪಿಗೆ 79-94 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 103-118 ಸ್ಥಾನಗಳು ಮತ್ತು ಜೆಡಿಎಸ್‌ಗೆ 25-33 ಸೀಟುಗಳನ್ನು ಭವಿಷ್ಯ ನುಡಿದಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com