4.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ಮಗುವಿನ ತಾಯಿಗೆ 1 ಲಕ್ಷ ಕೊಟ್ಟು ಉಳಿದ ಹಣವನ್ನು ಹಂಚಿಕೊಂಡ ದಲ್ಲಾಳಿಗಳು!

4.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ಮಗುವಿನ ತಾಯಿಗೆ 1 ಲಕ್ಷ ಕೊಟ್ಟು ಉಳಿದ ಹಣವನ್ನು ಹಂಚಿಕೊಂಡ ದಲ್ಲಾಳಿಗಳು!

ಜಾರ್ಖಂಡ್‍;ಗಂಡು ಮಗುವನ್ನು ತಾಯಿ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಛತ್ರಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ್ದು,ಮಗುವಿನ ಮಾರಾಟದ ಬಗ್ಗೆ ಮಾಹಿತಿ ತಿಳಿದು ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ.

ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿಗಳು ನವಜಾತ ಶಿಶುವನ್ನು 4.5 ಲಕ್ಷ ರೂ.ಗೆ ಮಾರಾಟ ಮಾಡಲು ಚಾತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.

ಮಗುವಿನ ತಾಯಿಗೆ 1 ಲಕ್ಷ ನೀಡಿ, ಉಳಿದ 3.5 ಲಕ್ಷವನ್ನು ದಲ್ಲಾಳಿಗಳಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಸದರ್ ಆಸ್ಪತ್ರೆಯ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com