ಐಪಿಎಸ್ ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ

ಐಪಿಎಸ್ ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ

ಗೋವಾ;ಪಬ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ,ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಯಿಂದ ವಜಾಗೊಳಿಸಲಾಗಿದೆ.

ಐಪಿಎಸ್ ಅಧಿಕಾರಿ ಕೋನ್ ಸೋಮವಾರ ರಾತ್ರಿ ಗೋವಾದ ಬಾರ್‌ನಲ್ಲಿ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಡಿಐಜಿ ಮಹಿಳೆಯೊಂದಿಗೆ ಜಗಳವಾಡುತ್ತಿರುವುದು ಸೆರೆಯಾಗಿದೆ.ಟೋಪಿ ಧರಿಸಿರುವ ವ್ಯಕ್ತಿಯನ್ನು ಬೌನ್ಸರ್ ಹೊರಗೆ ಕರೆತರುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಅನಾರೋಗ್ಯದ ಕಾರಣ ಕೋನ್ ಅವರು ಆಗಸ್ಟ್ 1 ರಿಂದ ಆಗಸ್ಟ್ 14 ರವರೆಗೆ ತಮ್ಮ ಕಚೇರಿಯಿಂದ ರಜೆ ತೆಗೆದುಕೊಂಡಿದ್ದರು.

ಬುಧವಾರ ಸದನದಲ್ಲಿ ಗೋವಾ ಫಾರ್ವರ್ಡ್ ಪಾರ್ಟಿಯ (ಜಿಎಫ್‌ಪಿ) ವಿಜಯ್ ಸರ್ದೇಸಾಯಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಸಿಎಂ ಸಾವಂತ್ ಡಿಐಜಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ