ಮದುವೆ ಹಾಲ್ ನಲ್ಲಿ ಅಗ್ನಿ ಅವಘಡ; 100 ಮಂದಿ ದುರ್ಮರಣ

ಇರಾಕ್ ನ ಮದುವೆ ಮಂಟಪವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 100 ಮಂದಿ ಮೃತಪಟ್ಟು, 150 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾಕ್ನ ಹಮ್ದಾನಿಯಾ ಪ್ರದೇಶದ ನಿನೆವೆ ಪ್ರಾಂತ್ಯದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಇದು ರಾಜಧಾನಿ ಬಾಗ್ದಾದ್ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿರುವ ಉತ್ತರ ನಗರ ಮೊಸುಲ್ ನ ಹೊರಗೆ ನಡೆದಿರುವಂತಹ ಘಟನೆಯಾಗಿದೆ.

ಬೆಂಕಿಯ ಕಾರಣದ ಬಗ್ಗೆ ತಕ್ಷಣದ ಮಾಹಿತಿ ತಿಳಿದು ಬಂದಿಲ್ಲ. ಟೆಲಿವಿಷನ್ ದೃಶ್ಯಾವಳಿಗಳು ಮದುವೆ ಮಂಟಪದ ಒಳಗೆ ಸುಟ್ಟುಹೋದ ಅವಶೇಷಗಳನ್ನು ತೋರಿಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಆರೋಗ್ಯ ಅಧಿಕಾರಿಗಳು ಸರ್ಕಾರಿ ಸ್ವಾಮ್ಯದ ಇರಾಕಿ ಸುದ್ದಿ ಸಂಸ್ಥೆ ಮೂಲಕ ಸಾವಿನ ಅಂಕಿಅಂಶವನ್ನು ನೀಡಿದ್ದು, ಈ ಕುರಿತಂತೆ ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್