ಕೇರಳ;ಲುಲು ಮಾಲ್‌ನಲ್ಲಿ ಬುರ್ಖಾ ಧರಿಸಿ ಮಹಿಳೆಯರ ವಾಶ್‌ರೂಮ್‌ಗೆ ಪ್ರವೇಶಿಸಿ ಮೊಬೈಲ್ ಫೋನ್‌ನಲ್ಲಿ ಅವರ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪದ ಮೇಲೆ 23 ವರ್ಷದ ಐಟಿ ವೃತ್ತಿಪರನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿ ಬಿ.ಟೆಕ್ ಪದವೀಧರನಾಗಿದ್ದು, ಆತನ ವಿರುದ್ಧ ದಿನ ಐಪಿಸಿಯ ಸೆಕ್ಷನ್ 354 (ಸಿ) ಮತ್ತು 419 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗೆ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕಲಮಸ್ಸೆರಿ ಪೊಲೀಸರು ತಿಳಿಸಿದ್ದಾರೆ.
ಲುಲು ಮಾಲ್‌ನಲ್ಲಿ ಬುಧವಾರ ಈ ಘಟನೆ ನಡೆದಿದೆ. ಇಲ್ಲಿನ ಇನ್ಫೋಪಾರ್ಕ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಬುರ್ಖಾ ಧರಿಸಿ ಮಹಿಳೆಯರ ವಾಶ್‌ರೂಮ್‌ಗೆ ನುಗ್ಗಿ ತನ್ನ ಮೊಬೈಲ್ ನ್ನು ಅಲ್ಲಿ ಇರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶ್‌ರೂಮ್‌ನ ಮುಖ್ಯ ಬಾಗಿಲಿನೊಳಗೆ ಕ್ಯಾಮೆರಾ ಇಟ್ಟ ನಂತರ ಆತ ಹೊರಗೆ ನಿಂತಿದ್ದಾನೆ.ಆತನ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿದ ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಚಾರಣೆ ವೇಳೆ ಆತ ಮಹಿಳೆಯ ವೇಷ ಧರಿಸಿದ್ದು, ವಾಶ್‌ರೂಮ್‌ನಲ್ಲಿದ್ದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಆರೋಪಿಯ ಬುರ್ಖಾ ಹಾಗೂ ಮೊಬೈಲ್ ವಶಪಡಿಸಿಕೊಂಡು ಆತನನ್ನು ವಶಕ್ಕೆ ಪಡೆಯಲಾಗಿದೆ.