ಜಗದೀಶ್ ಶೆಟ್ಟರ್ ಕಚೇರಿಯಲ್ಲಿ ಇನ್ನೂ ಇವೆ ಮೋದಿ, ಅಮಿತ್ ಶಾ ಫೋಟೋ?

ಹುಬ್ಬಳ್ಳಿ:ಬಿಜೆಪಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಕಚೇರಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳನ್ನು ಇನ್ನೂ ತೆರವು ಮಾಡದೆ ಅವರ ಮೇಲಿನ ಅಭಿಮಾನವನ್ನು‌ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಶೆಟ್ಟರ್ ಅವರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳಿದೆ.

1994ರಿಂದ ಬಿಜೆಪಿ ಟಿಕೆಟ್ನಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನ್ನು ಪ್ರತಿನಿಧಿಸುತ್ತಿದ್ದ ಶೆಟ್ಟರ್ ಕೇಸರಿ ಪಕ್ಷಕ್ಕೆ ಅಲ್ಲಿ ಭದ್ರ ಬುನಾದಿ ಹಾಕಿಕೊಟ್ಟಿದ್ದರು.ಆದರೆ ಇದೀಗ ಬದಲಾದ ಸನ್ನಿವೇಶದಲ್ಲಿ ಶೆಟ್ಟರ್ ಈಗ ಕಾಂಗ್ರೆಸ್ ಪರವಾಗಿ ಸ್ಪರ್ಧಿಸುತ್ತಿದ್ದಾರೆ.

ಶೆಟ್ಟರ್ ಅವರ ಕಚೇರಿಯಲ್ಲಿ ಈಗಲೂ ಮೋದಿ-ಶಾ ಅವರ ಫೋಟೋಗಳು ಗೋಡೆ ಮೇಲೆ ನೇತು ಹಾಕಲಾಗಿದೆ.
ಭಾರತೀಯ ಜನತಾ ಪಕ್ಷದಿಂದ ಹೊರಬಂದ ನಂತರ ಮೋದಿ-ಶಾ ಫೋಟೋಗಳನ್ನು ಏಕೆ ತೆಗೆದುಹಾಕಿಲ್ಲ ಎಂದು ಪ್ರಶ್ನಿಸಿದಾಗ, ‘ಇದರಲ್ಲಿ ಆಶ್ಚರ್ಯವೇನಿದೆ? ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಫೋಟೋ ತೆಗೆಯುವುದು ಒಳ್ಳೆಯದಲ್ಲ. ನಾನು ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಶೆಟ್ಟರ್ ರೀತಿಯಲ್ಲೇ ಈ ಹಿಂದೆ ಶೆಟ್ಟರ್ ಅವರ ಪತ್ನಿ ಕೂಡ ಹಲವಾರು ಬಾರಿ ಮೋದಿ ಮತ್ತು ಶಾ ಬಗ್ಗೆ ತಮಗೆ ಅಪಾರ ಗೌರವವಿದೆ ಎಂದು ಹೇಳಿರುವುದನ್ನು ಕೂಡ ಗಮನಿಸಬಹುದಾಗಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com