ಸನ್ಯಾಸತ್ವ ಸ್ವೀಕರಿಸಿದ ಪಿಯುಸಿ ಟಾಪರ್ ಆಗಿದ್ದ ಪ್ರತಿಭಾನ್ವಿತ ಯುವತಿ

ವಿಜಯನಗರ;ಎಸೆಸೆಲ್ಸಿ, ಪಿಯುಸಿಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಮಹಾವೀರ ಜೈನ ಸನ್ಯಾಸ ದೀಕ್ಷೆ ಪಡೆಯಲು ಮುಂದಾಗಿದ್ದಾರೆ.

ಮುಮುಕ್ಷಾ ವಿಧಿ ಕುಮಾರಿ ಮಹಾವೀರ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ.ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದ ವತಿಯಿಂದ ದೀಕ್ಷಾ ಕಾರ್ಯಕ್ರಮ‌ ನಡೆಯಲಿದೆ.

ಮುಮುಕ್ಷಾ ಹೊಸಪೇಟೆಯ ಉದ್ಯಮಿಯಾದ ದಿವಂಗತ ಕಾಂತಿಲಾಲಾ ಜಿ ಜಿರಾವಲಾ ಮತ್ತು ರೇಖಾದೇವಿ ಜಿರಾವಲಾ ದಂಪತಿಯ ಪುತ್ರಿಯಾಗಿದ್ದಾರೆ.

10ನೇ ತರಗತಿಯಲ್ಲಿ ಶೇ.94.8, ಪಿಯುಸಿಯಲ್ಲಿ ಶೇ.99 ರಷ್ಟು ಫಲಿತಾಂಶ ಪಡೆದಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

ಮುಮುಕ್ಷಾಗೆ ಬಾಲ್ಯದಿಂದಲೇ ಜೈನ ಸನ್ಯಾಸ ತತ್ವದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು.ಇದೀಗ ಇಚ್ಛೆಯಂತೆ ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ.

ಟಾಪ್ ನ್ಯೂಸ್