ಚಿಕ್ಕೋಡಿ:ಹತ್ಯೆಗೊಳಗಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಅಂತ್ಯ ಸಂಸ್ಕಾರ ಇಂದು ನಡೆದಿದೆ.
ಅವರ ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಆಗಮಿಸಿ ಆಶ್ರಮದ ಬದಿಯ ಕೃಷಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
ಇನ್ನು ಜೈನ ಧರ್ಮದ ಸಂಪ್ರದಾಯದಂತೆ ಮುನಿ ಮಹಾರಾಜರ ಸಹೋಧರನ ಮಗ ಭೀಮಗೌಂಡ ಉಗಾರೆ ಮುನಿಗಳಿಗೆ ಅಗ್ನಿ ಸ್ಪರ್ಶ ನೀಡಿದ್ದಾರೆ.
ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.