BREAKING ಜಮ್ಮು- ಕಾಶ್ಮೀರದಲ್ಲಿ ಪ್ರಬಲ ಭೂಕಂಪನ, ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

ನವದೆಹಲಿ;ಮಂಗಳವಾರ ಮಧ್ಯಾಹ್ನ 1:30 ರ ಸುಮಾರಿಗೆ ಪೂರ್ವ ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದಿಂದ 18 ಕಿಮೀ ದೂರದಲ್ಲಿ 30 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಇತರ ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಭೂಕಂಪದಿಂದಾಗಿ ಶಾಲಾ ಮಕ್ಕಳು ಭಯಭೀತರಾಗಿದ್ದರು. ಅಂಗಡಿಗಳಲ್ಲಿದ್ದ ಜನರು ಹೊರಗೆ ಧಾವಿಸಿದರು. ಇದು ಭಯಾನಕವಾಗಿತ್ತು. ಇದು ಕಳೆದ ವಾರದ ಕಂಪನಗಳಿಗಿಂತ ಹೆಚ್ಚು ತೀವ್ರವಾಗಿತ್ತು ಎಂದು ಸ್ಥಳಿಯರೋರ್ವರು ಮಾದ್ಯಮಗಳಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್