ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ಧತಿ ಕುರಿತು ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವುದು ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿದ್ದು, ಅರ್ಜಿಗಳನ್ನು ಆಗಸ್ಟ್ 2ರಿಂದ ವಿಚಾರಣೆ ನಡೆಸಲು ನಿರ್ಧರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಪೀಠ ಮುಂದೆ ಅರ್ಜಿಗಳ ವಿಚಾರಣೆಯು ನಡೆಯಲಿದೆ ಎನ್ನಲಾಗಿದೆ.

ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಏಳು ಅರ್ಜಿದಾರರ ಪರವಾಗಿ ವಾದಿಸುತ್ತಿದ್ದೇನೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್