ಮಂಗಳೂರು;ನೆಹರು ಮೈದಾನದ ಬಳಿ ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು ಕೊಲೆಯಾದ ವ್ಯಕ್ತಿ.
ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎಂದು ಶಂಕಿಶಲಾಗಿದೆ.
ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಜನಾರ್ದನ ಬಾರಿಂಜ ವೃತ್ತಿಯಲ್ಲಿ ಚಾಲಕನಾಗಿದ್ದು, ಇಂದು ಮಧ್ಯಾಹ್ನ ವೇಳೆ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.