10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

ಶಿವಮೊಗ್ಗ;10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಮೃತ ದುರ್ದೈವಿ.

ಜಯಂತ್ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ ​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಯಂತ್ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್