ವಿಜಯಪುರ; ಜೆಡಿಎಸ್ ಅಭ್ಯರ್ಥಿ ಕುಸಿದು ಬಿದ್ದು ಮೃತ್ಯು

ವಿಜಯಪುರ:ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು.

ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್