ಜೆಎನ್ ಯುನಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಎಬಿವಿಪಿ ಕಾರ್ಯಕರ್ತರಿಂದ ಥಳಿತ; ಆರೋಪ

ನವದೆಹಲಿ;ಜೆಎನ್‌ಯುನಲ್ಲಿ ವಿಕಲಚೇತನ ಪಿಎಚ್‌ಡಿ ವಿದ್ಯಾರ್ಥಿಗೆ ಎಬಿವಿಪಿ ಕಾರ್ಯಕರ್ತರು ಥಳಿಸಿದ್ದಾರೆಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಸಂಶೋಧನಾ ವಿದ್ಯಾರ್ಥಿಯನ್ನು ಫಾರೂಕ್ ಆಲಂ ಎಂದು ಗುರುತಿಸಲಾಗಿದೆ.ಅವರು ಎನ್‌ಎಸ್‌ಯುಐನ ಕಾರ್ಯಕರ್ತರಾಗಿದ್ದರು.

ಎಬಿವಿಪಿ ಕಾರ್ಯಕರ್ತರು, ಎನ್‌ಎಸ್‌ಯುಐ ಕಾರ್ಯಕರ್ತ ಮತ್ತು ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಫಾರೂಕ್ ಆಲಂ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್‌ಎಸ್‌ಯುಐ ಈ ಬಗ್ಗೆ ಟ್ವೀಟ್‌ ಮಾಡಿದೆ.ಎಬಿವಿಪಿ ಕಾರ್ಯಕರ್ತರ ಹಲ್ಲೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

ಘಟನೆ ನಂತರ ಜೆಎನ್‌ಯು ಆಡಳಿತ ಮಂಡಳಿಯು ಪ್ರತಿಕ್ರಿಯಿಸಿದ್ದು, ಫಾರೂಕ್ ಹಾಸ್ಟೆಲ್ ತೊರೆಯುವಾಗ ಘಟನೆಗೆ ಕಾರಣವಾದ ವಿದ್ಯಾರ್ಥಿಗಳ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಹೇಳಿದೆ.

ಜೆಎನ್‌ಯು ಕ್ಯಾಂಪಸ್‌ನ ಎಸ್‌ಎಫ್‌ಐ ವಿದ್ಯಾರ್ಥಿ ಸಂಘ ಘಟನೆಯನ್ನು ಖಂಡಿಸಿದೆ ಮತ್ತು ಎಲ್ಲಾ ವಿದ್ಯಾರ್ಥಿಗಳು ಒಗ್ಗೂಡಿ ಎಬಿವಿಪಿ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ