ಬಾಲಕಿಯ ತಲೆಯ ಚರ್ಮ ಸಮೇತವಾಗಿ ಕಿತ್ತು ಬಂದ ಇಡೀ ಕೂದಲು; ಜಾಯಿಂಟ್ ವ್ಹೀಲ್‌ ನಲ್ಲಿ ಆಡುವಾಗ ಘಟನೆ

ಶ್ರೀರಂಗಪಟ್ಟಣ;ಜಾತ್ರೆಯ ಮೈದನಾದಲ್ಲಿ ಜಾಯಿಂಟ್‌ ವ್ಹೀಲ್‌ಗೆ ಬಾಲಕಿಯ ತಲೆಕೂದಲು ಸಿಲುಕಿ ಗಂಭೀರ ಗಾಯಗೊಂಡಿರುವ ಭಯಾನಕ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀವಿದ್ಯಾ(14) ಗಂಭೀರ ಗಾಯಗೊಂಡ ಬಾಲಕಿ.

ಜಾತ್ರೆಯ ಹಿನ್ನೆಲೆಯಲ್ಲಿ ವಿದ್ಯಾ ಕುಟುಂಬ ಶ್ರೀರಂಗಪಟ್ಟಣಕ್ಕೆ ತೆರಳಿದ್ದರು. ದೇವರ ದರ್ಶನದ ಬಳಿಕ ಬಾಲಕಿ ಜಾಯಿಂಟ್‌ ವ್ಹೀಲ್‌ ಆಡಲು ತೆರಳಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಬಾಲಕಿ ತಲೆಕೂದಲು ಜಾಯಿಂಟ್‌ ವ್ಹೀಲ್‌​ಗೆ ಸಿಕ್ಕಿ ಹಾಕಿಕೊಂಡಿದೆ.

ಬಾಲಕಿ ತಲೆಕೂದಲು ವ್ಹೀಲ್​ಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಪಕ್ಕದಲ್ಲಿ ಕುಳಿತುಕೊಂಡಿದ್ದ ಪೋಷಕರು ಕೂದಲನ್ನು ಬಿಡಿಸಿಕೊಳ್ಳಲು ಜೋರಾಗಿ ಎಳೆದಿದ್ದಾರೆ.ಈ ವೇಳೆ ತಲೆಯ ಕೂದಲು ಇಡಿ ಚರ್ಮದ ಸಮೇತವಾಗಿ ಕಿತ್ತುಕೊಂಡು ಬಂದಿದೆ.ಬಾಲಕಿ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ.

ಕೂಡಲೇ ಬಾಲಕಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com