ಶಂಕಿತ ಜುನೈದ್ ಪತ್ತೆಗೆ ಲುಕ್ ಔಟ್ ನೊಟೀಸ್ ಜಾರಿ

ಬೆಂಗಳೂರು;ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ ಈಗಾಗಲೇ ಬಂಧಿಸಿದ್ದಾರೆ.

ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಆರೋಪಿ -2 ಜುನೈದ್ ಪತ್ತೆಯಾಗಿ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.ಜುನೈದ್ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ನಜೀರ್, ಸುಹೇಲ್, ಉಮರ್, ಜಾಹೀದ್, ಮುದಾಸಿರ್, ಫೈಜಲ್ ಗೆ ಬಂಧಿಸಿದ್ದರು.

ಇದೀಗ ತಲೆ‌ಮರೆಸಿಕೊಂಡಿರುವ ಜುನೈದ್ ಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿದ್ದಾರೆ.ಟಾಪ್ ನ್ಯೂಸ್