ಬೆಂಗಳೂರು;ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.ಕಲಬುರಗಿಯಲ್ಲಿ ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡ್ತಾರೆ ಎಂದು ಹೇಳಿದ್ದಾರೆ.
1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ ತಿಂಗಳ 200 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ ಎಂದು ಮಾಹಿತಿ ನೀಡಿದರು