ಮಂಗಳೂರು:ಉಳ್ಳಾಲ ಪೊಲೀಸರು ಮತ್ತು ಮಂಗಳೂರು ಪೊಲೀಸ್ ಕಮೀಷನರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನಗೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರ ಕಚೇರಿಯಿಂದ ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕುಗಳ ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕಬೀರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಸಂದೀಪ್, ಎಸ್‌ಐ ಪ್ರದೀಪ್ ಮತ್ತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ನೇರ ಶಾಮೀಲು ಇರುವ ಭ್ರಷ್ಟಾಚಾರದ ಆರೋಪದ ವಿರುದ್ಧ ನಾನು ಲೋಕಾಯುಕ್ತರಿಗೆ ದೂರು ನೀಡಿದ್ದೇನೆ.ಇದಕ್ಕೆ ಎಲ್ಲಾ ಸಾಕ್ಷ್ಯಗಳು ನನ್ನ ಬಳಿ ಇವೆ ಎಂದು ಹೇಳಿದ್ದಾರೆ.
ಲೋಕಾಯುಕ್ತರು ನನ್ನ ವಿರುದ್ಧ ಆರೋಪ ಮಾಡಿರುವ ಪೊಲೀಸ್ ಆಯುಕ್ತರಿಂದ ವರದಿ ಕೇಳಲು ಹೇಗೆ ಸಾಧ್ಯ ಎಂದು ಲೋಕಾಯುಕ್ತರಿಗೆ ಮತ್ತೊಮ್ಮೆ ದೂರು ನೀಡಿದ್ದೇನೆ. ಪೊಲೀಸ್ ಕಮಿಷನರ್ ಕಚೇರಿಯಿಂದ ಪದೇ ಪದೇ ಕರೆ ಮಾಡಿ ನೋಟಿಸ್ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಪ್ರಕರಣದಿಂದ ನಾನು ಹಿಂದೆ ಸರಿಯುವುದಿಲ್ಲ, ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇನೆ ಎಂದು ಕಬೀರ್ ಹೇಳಿದ್ದಾರೆ.