ಕಡಬ: ಬೆಳ್ಳಂಬೆಳಗ್ಗೆ ಆನೆ ದಾಳಿಗೆ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ.
ಮೃತರನ್ನು ರಮೇಶ್ ರೈ (50) ಮತ್ತು ರಂಜಿತಾ (23) ಎಂದು ಗುರುತಿಸಲಾಗಿದೆ.
ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ರಂಜಿತಾ ಅವರ ರಕ್ಷಣೆಗೆ ತೆರಳಿದ್ದು ಆನೆ ರಮೇಶ್ ಮೇಲೂ ದಾಳಿ ನಡೆಸಿದೆ.
ಘಟನೆಯಲ್ಲಿ ರಮೇಶ್ ಸ್ಥಳದಲ್ಲೇ ಮೃತಪಟ್ಟರೆ ರಂಜಿತಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.