ಕಡಬ:KSRTC ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬಾಲಕ ಮೃತಪಟ್ಟು 5 ಮಂದಿ ಗಂಭೀರ ಗಾಯಗೊಂಡ ಘಟನೆ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ಮರ್ಧಾಳ ಕಡೆಯಿಂದ ಸುಬ್ರಹ್ಮಣ್ಯ ತೆರಳುತ್ತಿದ್ದ ಕಾರು ಹಾಗೂ ಧರ್ಮಸ್ಥಳ – ಸುಬ್ರಹ್ಮಣ್ಯ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ. ಸಿ ಬಸ್ ಐತ್ತೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ.
ಗಾಯಾಳುಗಳಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.