ಕಡಬ;ಯುವಕನೋರ್ವನಿಗೆ ಹಲ್ಲೆ ನಡೆಸಿದ ತಂಡ

ಕಡಬ:ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಆತನ ಸಹೋದರನಿಗೆ ಕೊಲೆ‌ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಕೊಯಿಲ ನಿವಾಸಿ ನಿಝಾಮ್ ಅವರು ಹಲ್ಲೆ ಸಂತ್ರಸ್ತ. ಅವರನ್ನು ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.ಹಣ ಕೊಡದಿದ್ದರೆ ಶಾರೂಕ್ ನನ್ನು ಅಪಹರಿಸಿ ಕೊಲೆ ಮಾಡುವುದಾಗಿ ಹೇಳಿದ್ದಾರೆ ಎಂದು ನಿಝಾಮ್ ಹೇಳಿದ್ದಾರೆ.

ಟಾಪ್ ನ್ಯೂಸ್