ಕಡಬ ಮೂಲದ ಯುವಕ ರೈಲಿನಿಂದ ಬಿದ್ದು ಮೃತ್ಯು

ಕಡಬ: ಕಡಬ ಮೂಲದ ಯುವಕನೋರ್ವ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ (34) ಎಂದು ಗುರುತಿಸಲಾಗಿದೆ.

ನೀರಾಜೆಯ ಸುರೇಶ್ ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದು, ಗುರುವಾರ ರಾತ್ರಿ ಮನೆಗೆ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವ ಬಗ್ಗೆ ತಿಳಿಸಿದ್ದರು.

ಆದರೆ ಮುಂಜಾನೆ 8 ಗಂಟೆ ಸುಮಾರಿಗೆ ಅವರ ಮನೆಯವರು ಮೊಬೈಲ್ ನಂಬರ್ ಕರೆ ಮಾಡಿದರೆ ಆಸ್ಪತ್ರೆಯ ಸಿಬ್ಬಂದಿ ಪೋನ್ ಕರೆ ಸ್ವೀಕರಿಸಿ ಸುರೇಶ್ ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಚೌತಿ ಹಬ್ಬದ ಹಿನ್ನೆಲೆ ಮನೆಗೆ ಬಂದು ಮತ್ತೆ ಕೆಲಸಕ್ಕೆಂದು ಹೋಗಿದ್ದ ಸುರೇಶ್ ಇದೀಗ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್