ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು

ಕಡಬ:ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಆಲಂಕಾರು ಗ್ರಾಮದ ಬಾರ್ಕುಲಿ ಬಳಿ ನಡೆದಿದೆ.

ಉದಯ ಕುಮಾರ್ (27) ಮೃತ ಯುವಕ. ಇವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನ.12ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿತ್ತು.

ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಟಾಪ್ ನ್ಯೂಸ್