ಮಂಗಳೂರು;ಕದ್ರಿ ದೇವಸ್ಥಾನದ ಆವರಣದಲ್ಲಿ ತಿರುಗಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮಂಗಳೂರು;ಕದ್ರಿ ದೇವಸ್ಥಾನದ ಆವರಣದಲ್ಲಿ ಗುರುವಾರ ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡಿದ್ದಾರೆಂದು ಆರೋಪಿಸಿ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿ ಅವರನ್ನು ವಿಚಾರಿಸಿದ್ದಾರೆ.

ಯುವಕರು ದೇವಸ್ಥಾನದ ಅಂಗಣಕ್ಕೆ ಬೈಕ್ ತಂದಿದ್ದಲ್ಲದೇ ಚಪ್ಪಲಿ ಧರಿಸಿ ಅಡ್ಡಾಡುತ್ತಿದ್ದರು ಎಂದು ಅರೋಪಿಸಲಾಗಿದೆ.

ವಿಚಾರಿಸಿದಾಗ ತಾವು ಅಸೈಗೋಳಿಯಿಂದ ಕಾಟಿಪಳ್ಳಕ್ಕೆ ಹೋಗುವವರಾಗಿದ್ದು,ತಪ್ಪಾಗಿ ಗೂಗಲ್ ಮ್ಯಾಪ್ ನೋಡಿಕೊಂಡು ಹೋಗುವಾಗ ದಾರಿ ತಪ್ಪಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ದೇವಸ್ಥಾನದ ಆವರಣವನ್ನು ಪ್ರವೇಶಿಸಿದ ಬಗ್ಗೆ ತಿಳಿಸುವಂತೆ ಕೇಳಿದಾಗ, ಅವರಿಂದ ಸೂಕ್ತ ಉತ್ತರ ದೊರೆಯದಿದ್ದಾಗ ಅವರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್