ಕೈಕಂಬ ಬಸ್ ಪಲ್ಟಿ; 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಕೈಕಂಬ:ಪೊಳಲಿ ದ್ವಾರದ ಬಳಿ ಖಾಸಗಿ ಬಸ್‌ವೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ‌.

ಖಾಸಗಿ ಬಸ್ ಕೈಕಂಬದಿಂದ ಅಡ್ಡೂರು ಕಡೆ‌ ಸಂಚರಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ.

ಘಟನೆಯಿಂದ ಸುಮಾರು 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್