ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ 6 ಜನರು ದುರ್ಮರಣ

-ಬೀಬಿ ಫಾತಿಮಾ,ನಜ್ಜಿನ್ ಬೇಗಂ,ಅಬೂಬಕ್ಕರ್,ಬೀಬಿ ಮರಿಯಮ್,ಹಮ್ಮದ್ ಪಾಷಾ, ಬಾಬಾ ಮೃತರು.

ಕಲಬುರಗಿ:ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಘಟನೆಯಲ್ಲಿ ನಜ್ಜಿನ್ ಬೇಗಂ(28), ಬೀಬಿ ಫಾತಿಮಾ (12),ಅಬೂಬಕ್ಕರ್ (4), ಬೀಬಿ ಮರಿಯಮ್ ( 3 ತಿಂಗಳ ಮಗು), ಹಮ್ಮದ್ ಪಾಷಾ (20), ಆಟೋ ಚಾಲಕ ಬಾಬಾ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮಕ್ಕೆ ಸೇರಿದವರಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಟಾಪ್ ನ್ಯೂಸ್