ಹಾವು ಕಚ್ಚಿ ಬಾಲಕಿ ಮೃತ್ಯು

ಹಾವು ಕಚ್ಚಿ ಬಾಲಕಿ ಮೃತ್ಯು

ಕಲಬುರಗಿ:ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ ನಡೆದಿದೆ.

8ನೇ ತರಗತಿಯಲ್ಲಿ ಓದುತ್ತಿದ್ದ ಅಕ್ಷತಾ ನಾಗಪ್ಪ ಹೊಗಾಡಿ(17) ಮೃತಪಟ್ಟ ಬಾಲಕಿ.ಬಾಲಕಿಗೆ ಹಾವು ಕಚ್ಚಿದ ಬಳಿಕ ಚಿಕಿತ್ಸೆಗಾಗಿ ಸೇಡಂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಕುರಿತು ಸುಲೇಪೇಟ ಠಾಣೆಯ ಸಬ್ ಇನಸ್ಪೆಕ್ಟರ್ ನಂದಿನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್