ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ ಕುಟುಂಬ

ಕಲಬುರಗಿ‌:ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೃತನ‌ ಕುಟುಂಬ ಪೊಲೀಸರ ಮೇಲೆ ಕೊಲೆ ಆರೋಪ ಮಾಡಿದೆ.

ಅಶೋಕ ನಗರ ಪೊಲೀಸರ ವಶದಲ್ಲಿದ್ದ ಉದಯ್ ಪಾರ್ದಿ (55) ಮೃತಪಟ್ಟಿದ್ದಾರೆ.ಇದೀಗ ಉದಯ್ ಕುಟುಂಬ ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪ ಮಾಡಿದೆ.

ಮಡ್ಡಿ ಸಿರಸಗಿ ಗ್ರಾಮದ ಉದಯ್ ಪಾರ್ದಿ, ಅನಾರೋಗ್ಯ ಹಿನ್ನೆಲೆಯಲ್ಲಿ ಮನೆಯಲ್ಲಿ ಇರುತ್ತಿದ್ದ ಎನ್ನಲಾಗಿದೆ.

ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉದಯ್‌ ಪಾರ್ದಿ ಗೆ ಬಂಧಿಸಿದ್ದರು.

ಈ ಹಿನ್ನೆಲೆ ಉದಯ್​ನನ್ನು ಮಡ್ಡಿ ಸಿರಸಗಿ ಗ್ರಾಮದಲ್ಲಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಯದಿಂದ ಉದಯ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

​ಆದರೆ ಇದೀಗ ಮೃತನ ಕುಟುಂಬ ಪೊಲೀಸರ ಮೇಲೆ ಗಂಭೀರವಾದ ಅರೋಪ ಮಾಡಿದೆ, ಅಶೋಕ ನಗರ ಠಾಣೆ ಪೊಲೀಸರು ಅಮಾಯಕ ಉದಯ್​ನನ್ನು ಕರೆದುಕೊಂಡು ಹೋಗಿ ವಿಚಾರಣೆ ನೆಪದಲ್ಲಿ ಹೊಡೆದು ಸಾಯಿಸಿದ್ದಾರೆ ಎಂದು ಮೃತ ಉದಯ್​ನ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ್, ಕುಟುಂಬಸ್ಥರು ನೀಡಿದ ದೂರಿನ ಅನ್ವಯ ಕೇಸ್​ ದಾಖಲಿಸಿಕೊಳ್ಳಲಾಗುವುದು. ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ಕೇಸ್ ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿ ಕುಟುಂಬಸ್ಥರು ಹಾಗೂ ಗ್ರಾಮದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ