ಸೌದಿ ಅರೇಬಿಯಾ;ಕರಾವಳಿಯ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೂಡಬಿದ್ರೆ ಗಂಟಲ್ ಕಟ್ಟೆ ಕಲ್ಲಬೆಟ್ಟು ನಿವಾಸಿ ಅಬ್ದುಲ್ ರಹಿಮಾನ್ ಸೌದಿ ಅರೇಬಿಯಾದ ದಮಾಮ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 55 ವರ್ಷದ ರಹಿಮಾನ್ ಅವರಿಗೆ ದಿಡೀರ್ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ.ರಹಿಮಾನ್ ಅವರು 25 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದೆ.
ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಕುಟುಂಬವನ್ನು ಅಗಲಿದ್ದಾರೆ.ರಹಿಮಾನ್ ಅಗಲಿಕೆಯಿಂದ ಕುಟುಂಬದ ರೋದನ ಮುಗಿಲು ಮುಟ್ಟಿದೆ.