ಕಲ್ಲಡ್ಕ; ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಕಲ್ಲಡ್ಕ; ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ.

ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ ಮಕ್ಕಳ ಜೊತೆ ದೈವದ ಕಾರ್ಯಕ್ಕೆ ಹೋಗಿದ್ದರು.ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ಬಳಿ 2 ಗಂಟೆ ಸುಮಾರಿಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು.

ಆದರೆ ರಾತ್ರಿ ‌7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಜಗದೀಶ್ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.ಕಾರಿನ ಡೋರ್ ತೆಗೆದು ನೋಡಿದಾಗ ಜಗದೀಶ್ ಮೃತಪಟ್ಟಿರುವುದು ಕಂಡು ಬಂದಿದೆ.

ಜಗದೀಶ್ ಹೃದಯಾಘಾತ ಸಂಭವಿಸಿದೆಯಾ? ಅಥವಾ ಗಾಳಿ ಸಮಸ್ಯೆ ಉಂಟಾಗಿದೆಯಾ? ಎಂದು ಸಾವಿಗೆ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com