ಕಲ್ಲಡ್ಕ; ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ; ಯುವಕ ಮೃತ್ಯು

ಬಂಟ್ವಾಳ:ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(28) ಮೃತಪಟ್ಟ ಯುವಕ.

ಲತೀಶ್ ಮಂಗಳೂರಿನಲ್ಲಿ ಮ್ಯಾಕನಿಕ್ ಆಗಿ ಕೆಲಸ ಮಾಡುತ್ತಿದ್ದ.ನಿನ್ನೆ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕದಲ್ಲಿ ಅಪಘಾತ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಸೆಲಿನಾ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ.ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾನೆ.

ಅಪಘಾತದ ಸ್ಥಳಕ್ಕೆ ಟ್ರಾಫಿಕ್ ಫೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ