ಕಲ್ಲಡ್ಕ; ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತ್ಯು

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ(23)ಮೃತಪಟ್ಟ ಯುವತಿ.

ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಮನೆಗೆ ಬಂದಿದ್ದರು‌‌.

ದಾಸಕೋಡಿ ಬಳಿ ಬಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್