ಕಲ್ಲಡ್ಕ ಪ್ರಭಾಕರ್ ಭಟ್ & ರಾಘವೇಶ್ವರ ಸ್ವಾಮೀಜಿ ವಿರುದ್ಧದ ಪ್ರಕರಣ ರದ್ದು; ಏನಿದು ಆತ್ಮಹತ್ಯೆ ಪ್ರಚೋದನೆ ಕೇಸ್? ಇಲ್ಲಿದೆ ಮಾಹಿತಿ..

ಬೆಂಗಳೂರು:ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲಾಗಿದೆ.

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರಲ್ಲಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.ಇದೀಗ ನ್ಯಾ.ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್‌ ಪೀಠ ಸ್ವಾಮೀಜಿ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧ ಅತ್ಯಾಚಾರದ ಆರೋಪ ಪ್ರಕರಣದಲ್ಲಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪ್ರಮುಖ ಸಾಕ್ಷಿಯಾಗಿದ್ದರು.ಶ್ಯಾಮ್ ​ಪ್ರಸಾದ್ ಶಾಸ್ತ್ರಿ ಸಂತ್ರಸ್ತೆ ಮಹಿಳೆಯ ಸಂಬಂಧಿಕನಾಗಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನದಂದು ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಬೋಳಂತಾಯ ಶಿವಶಂಕರ್ ಭಟ್ ಅವರು ತಮ್ಮ ಪತಿಗೆ ಕರೆ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ರಾಘವೇಶ್ವರ ಶ್ರೀಗಳ ಪರವಾಗಿ ಸಾಕ್ಷಿ ಹೇಳಬೇಕು.ರಾಮಚಂದ್ರಾಪುರ ಮಠಕ್ಕೆ ಹೋಗಿ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು.ಅಣ್ಣ-ಅತ್ತಿಗೆ ಮಾಡಿದ್ದು ತಪ್ಪು ಎಂದು ಒಪ್ಪಿ ಲಿಖಿತವಾಗಿ ಬರೆದುಕೊಡಬೇಕು ಎಂದು ತಮ್ಮ ಪತಿಗೆ ಬೆದರಿಕೆ ಹಾಕಿದ್ದಾಗಿ ಶ್ಯಾಸ್ತ್ತಿಯವರ ಪತ್ನಿ ಸಂಧ್ಯಾಲಕ್ಷ್ಮೀ ಆರೋಪಿಸಿದ್ದರು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com