ಮಹಿಳೆ ಸಂಶಯಾಸ್ಪದ ಸಾವು; ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿರುವ ಶಂಕೆ

ಮಹಿಳೆ ಸಂಶಯಾಸ್ಪದ ಸಾವು; ಕೊಲೆ ಮಾಡಿರುವ ಶಂಕೆ

ಶಿವಮೊಗ್ಗ:ಮಹಿಳೆಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಮಲಮ್ಮ (54) ಎಂದು ಗುರುತಿಸಲಾಗಿದೆ.

ವಿಜಯನಗರದ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಕಮಲಮ್ಮ ಅವರು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಹೊಸದುರ್ಗದಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.‌ಮಲ್ಲಿಕಾರ್ಜುನ ಅವರು ತಮ್ಮ ಸ್ನೇಹಿತರೊಂದಿಗೆ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು.ಕಮಲಮ್ಮ ಮನೆಯಲ್ಲಿ ಒಬ್ಬರೇ ಇದ್ದರು.

ಮಲ್ಲಿಕಾರ್ಜುನ ಅವರು ಪತ್ನಿ ಕಮಲಮ್ಮಗೆ ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ ಇದರಿಂದಾಗಿ ಮಲ್ಲಿಕಾರ್ಜುನ ಅವರು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ.ಈ ವೇಳೆ ನೆರೆ ಮನೆಯವರು ಮಲ್ಲಿಕಾರ್ಜುನ ಅವರ ಮನೆಗೆ ಹೋಗಿ ಪರಿಶೀಲಿಸಿದ್ದು ಘಟನೆ ಬೆಳಕಿಗೆ ಬಂದಿದೆ.

ಘಟನೆ ಹಿನ್ನೆಲೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸೇರಿ ಪೊಲೀಸ್ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್