ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭ; ಕಂಠೀರವ ಸ್ಟೇಡಿಯಂನಲ್ಲಿ ನೂಕುನುಗ್ಗಲು,ಇಬ್ಬರಿಗೆ ಗಾಯ

ಬೆಂಗಳೂರು:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿಎಂ, ಡಿಸಿಎಂ ಜೊತೆ 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು ಉಂಟಾಗಿದೆ.ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿರುವ ಬಗ್ಗೆಯೂ ವರದಿಯಾಗಿದೆ.

ಸ್ಟೇಡಿಯಂನ ಪ್ರವೇಶ ದ್ವಾರವನ್ನು ಸಾರ್ವಜನಿಕರಿಗಾಗಿ ಓಪನ್ ಮಾಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಒಳಗಡೆ ನುಗ್ಗಿದ್ದಾರೆ. ಸಾರ್ವಜನಿಕರನ್ನು ಕಂಟ್ರೋಲ್ ಮಾಡಲು ಪೊಲೀಸರ ಸಾಹಸಪಡಬೇಕಾಯಿತು. ತಳ್ಳಾಟದಲ್ಲಿ ಒಬ್ಬರು ಅಸ್ವಸ್ಥರಾಗಿ ಕೆಳಗಡೆ ಬಿದ್ದ ಪ್ರಸಂಗ ನಡೆದಿದೆ. ಓರ್ವ ಪೊಲೀಸ್‍ಗೂ ಗಾಯಗಳಾಗಿದೆ. ಕೂಡಲೇ ಪೊಲೀಸರು ಗಾಯಾಳುಗಳನ್ನು ಎತ್ತಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವ ಜನರು ಕಂಠೀರವ ಕ್ರೀಡಾಂಗಣದ ಒಳಗೆ ಹೋಗಲು ನೂಕುನುಗ್ಗಲು ಶುರುವಾಗಿದೆ.

ನೂಕುನುಗ್ಗಲಾದ ಹಿನ್ನೆಲೆ ಸ್ಥಳಕ್ಕೆ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಆಗಮಿಸಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮತ್ತು ಸಾರ್ವಜನಿಕ ಪ್ರವೇಶ ದ್ವಾರ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ

1,800 ಮಂದಿ ಪೊಲೀಸರಿಂದ ಕಾರ್ಯಕ್ರಮಕ್ಕೆ ಭದ್ರತೆಗೆ ನಿಯೋಜಿಸಲಾಗಿದೆ.

ಪೊಲೀಸ್​ ಕಮಿಷನರ್​​, ಸ್ಪೆಷಲ್​​​ ಟ್ರಾಫಿಕ್​ ಕಮಿಷನರ್​​ ಹಾಗೂ ಇಬ್ಬರು ಜಂಟಿ ಆಯುಕ್ತರು, ಇಬ್ಬರು ಹೆಚ್ಚುವರಿ ಆಯುಕ್ತರು ಮತ್ತು 8 ಮಂದಿ DCPಗಳ ನೇತೃತ್ವದಲ್ಲಿ ಬಂದೋಬಸ್ತ್​​ ಕೈಗೊಳ್ಳಲಾಗಿದ್ದು,10 ಮಂದಿ ACP, 28 ಮಂದಿ ಇನ್ಸ್​​ಪೆಕ್ಟರ್​​ಗಳ ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com