ಮಲೇಷ್ಯಾ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿ ವಾಪಾಸ್ಸಾದ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಗೆ ಕೇರಳದಲ್ಲಿ ಅದ್ದೂರಿ ಸ್ವಾಗತ; ವಿಮಾನ ನಿದ್ಧಾಣಕ್ಕೆ ಹರಿದು ಬಂದ ಜನ

ಕಲ್ಲಿಕೋಟೆ:ಮಲೇಷ್ಯಾ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿ ಭಾರತಕ್ಕೆ ವಾಪಾಸ್ಸಾದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಕರಿಪುರ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಗಿದೆ.

ಮಲೇಷ್ಯಾ ಸರ್ಕಾರದ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಕಾಂತಪುರಂ ಉಸ್ತಾದ್ ಇಂದು ಬೆಳಿಗ್ಗೆ ಕರಿಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದರು.ಕಾಂತಪುರಂ ಉಸ್ತಾದ್ ಅವರನ್ನು ಸ್ವಾಗತಿಸಲು ಬೆಳಿಗ್ಗೆ 6 ಗಂಟೆಯಿಂದಲೇ ಹೆಚ್ಚಿನ ಸಂಖ್ಯೆಯ ಜನರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮುಖಂಡರಾದ ರಈಸುಲ್ ಉಲಮಾ ಇ. ಸುಲೈಮಾನ್ ಮುಸ್ಲಿಯಾರ್, ಸಯ್ಯಿದ್ ಅಲಿ ಬಾಫಕಿ ತಂಙಳ್, ಸೆಯ್ಯದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ, ಪೇರೋಡು ಅಬ್ದುರ್ರಹ್ಮಾನ್ ಸಖಾಫಿ ಮುಂತಾದವರು ಕಾಂತಪುರಂ ಉಸ್ತಾದ್ ರನ್ನು ಬರಮಾಡಿಕೊಂಡರು.

ನೂರಾರು ವಾಹನಗಳ ಬೆಂಗಾವಲಿನಲ್ಲಿ ಕಾರಂದೂರು ಮರ್ಕಝ್ ಗೆ ತಲುಪಿದ ಕಾಂತಪುರಂ ಉಸ್ತಾದರನ್ನು ಕೇರಳ ಸರಕಾರದ ಮಂತ್ರಿಗಳು, ಜನಪ್ರತಿನಿಧಿಗಳು ಸ್ವಾಗತಿಸಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು