ಕಾರ್ಕಳ; ಜೋಕಾಲಿಯಲ್ಲಿ ಆಟವಾಡುವಾಗ ಸೀರೆ ಕತ್ತಿಗೆ ಸಿಲುಕಿ ಬಾಲಕಿ ಮೃತ್ಯು

ಕಾರ್ಕಳ:ಜೋಕಾಲಿಯಲ್ಲಿ ಆಟವಾಡುವಾಗ ಬಾಲಕಿಯರ್ವಳು ಕತ್ತಿಗೆ ಸೀರೆ ಸುತ್ತಿಕೊಂಡು ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ನಡೆದಿದೆ.

ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ(9)ಮೃತ ಬಾಲಕಿ.

ಮಾನ್ವಿ ನಿನ್ನೆ ಸಂಜೆ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿದೆ.ಬಳಿಕ ವಿಷಯ ತಿಳಿದ ಪೋಷಕರು ಮಾನ್ವಿಗೆ
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ‌.

ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com