ಕಾರ್ಕಳ; ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ಆರೋಪಿತ ವ್ಯಕ್ತಿಯೇ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ:ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಮೃತನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಇವರು ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು.

ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜು.14ರ ಬೆಳಿಗ್ಗೆ‌ ಮನೆಯಿಂದ ಬ್ಯಾಂಕ್ ಗೆ‌ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿತ್ತು.

ಈ ಕುರಿತಂತೆ ಪ್ರಮೀಳಾರವರ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು.

ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು ಆತ್ಮಹತ್ಯೆಗೈದು ಎರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್