ಕಾರ್ಕಳ: ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಮಾಳ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ ವೈಭವ್ ಮೃತ ವಿದ್ಯಾರ್ಥಿ. ಸಹ ಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ.
ಇಬ್ಬರು ಕೂಡ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಇವರು ಹೊರನಾಡು ದೇವಸ್ಥಾನದಲ್ಲಿ ಪ್ರಾರ್ಥಿಸಿ ವಾಪಾಸ್ಸಾಗುವಾಗ ಘಟನೆ ನಡೆದಿದೆ ಎನ್ನಲಾಗಿದೆ.ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.