ಕಾರ್ಕಳ; ಜಗಳವಾಡಿ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದ ಪತಿ; ಇಬ್ಬರು ಕೂಡ ದುರ್ಮರಣ, ಅನಾಥರಾದ ಮಕ್ಕಳು

ಕಾರ್ಕಳ;ಜಗಳವಾಡಿ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಲು ಬಾವಿಗೆ ಹರಿ ಪತಿ- ಪತ್ನಿ ಇಬ್ಬರು ಕೂಡ ಮೃತಪಟ್ಟ ದುರಂತ ಘಟನೆ ಕಾರ್ಕಳ ತಾಲೂಕು ನಲ್ಲೂರಿನಲ್ಲಿ ವರದಿಯಾಗಿದೆ.

ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ದಂಪತಿ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದಾರೆ.ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಸ್ಥಳೀಯರ ಸಹಾಯದಿಂದ ಹೊರಗೆ ತೆಗೆಯಲಾಗಿದೆ.

ಕಳೆದ ಎರಡು ವರ್ಷಗಳಿಂದ ಯಲ್ಲಾಪುರದ ಇಮ್ಯಾನುಲ್‌, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು.

ದಂಪತಿ ದುಡುಕಿನಿಂದ ಇದೀಗ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ‌.

ಡಿವೈಎಸ್‌ಪಿ ಅರವಿಂದ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು