ಬೆಂಗಳೂರು:2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಜ್ಜಾಗಿದೆ.ಇದೇ ಮೇ.18 ಕ್ಕೆ ಪ್ರಮಾಣ ವಚನಕ್ಕೆ ಕೂಡ ಸಿದ್ದತೆ ನಡೆಯುತ್ತಿದೆ.
ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಭಾರೀ ಪೈಪೋಟಿ ಇದ್ದು, ಇದರಲ್ಲಿ ಸಿದ್ದರಾಮಯ್ಯ ಹೆಸರು ಬಹುತೇಖ ಪೈನಲ್ ಆಗಿದೆ ಎಂಬುವುದು ಮೂಲಗಳಿಂದ ತಿಳಿದು ಬಂದಿದೆ. ಆದರೆ ಯಾವುದೇ ಅದೀಕೃತ ಘೋಷಣೆ ನಡೆದಿಲ್ಲ.
ಹೈಕಮಾಂಡ್ ನಾಯಕರ ಭೇಟಿಗೆ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರೊಂದಿಗೆ ನಿನ್ನೆಯೇ ದೆಹಲಿ ತಲುಪಿದ್ರೆ, ಇತ್ತ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲೇ ಉಳಿದಿದ್ದಾರೆ. ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಮಧ್ಯೆ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಹಾಗೂ ಡಿಕೆಶಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದೂ ಕೂಡ ಹೇಳಲಾಗಿದ್ದು, ಈ ಕುರಿತು ಹೈಕಮಾಂಡ್ ಗೊಂದಲಗಳಿಗೆ ತೆರೆ ಎಳೆಯಲಿದೆ.
ಕಾಂಗ್ರೆಸ್ ಸಂಪುಟಕ್ಕೆ ಸಂಭಾವ್ಯ ಸಚಿವರ ಪಟ್ಟಿಯನ್ನು ಕೂಡ ಈಗಾಗಲೇ ಸಿದ್ದಪಡಿಸಿದೆ. ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್,
ಕೆ.ಎಚ್. ಮುನಿಯಪ್ಪ ,ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ,ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಎಚ್.ಸಿ. ಮಹದೇವಪ್ಪ, ಲಕ್ಷ್ಮಣ ಸವದಿ, ಶಿವಲಿಂಗೇಗೌಡ,
ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್,ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ವೈ, ಮೇಟಿ, ಜಮೀರ್ ಅಹ್ಮದ್ ಖಾನ್,ಅಬ್ಬಯ್ಯ ಪ್ರಸಾದ್, ನಾಗೇಂದ್ರ, ಎಸ್.ಎಸ್. ಮಲ್ಲಿಕಾರ್ಜುನ್, ಕೊತ್ತೂರು ಮಂಜುನಾಥ್, ನರೇಂದ್ರ ಸ್ವಾಮಿ, ಆರ್ ವಿ ತಿಮ್ಮಾಪುರ, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ತನ್ವೀರ್ ಸೇಠ್, ಅಜಯ್ ಸಿಂಗ್, ಪುಟ್ಟರಂಗ ಶೆಟ್ಟಿ ಸಾಂಭವ್ಯರ ಪಟ್ಟಿಯಲ್ಲಿದ್ದಾರೆ ಎಂದು ವರದಿಯಾಗಿದೆ.