ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತವನ್ನು ಪಡೆದಿದೆ.
ಈ ಬಾರಿ ರಾಜ್ಯದಲ್ಲಿ ಒಟ್ಟು 14 ಮಂದಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಅದರಲ್ಲಿ 9 ಮಂದಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಕಲಬುರಗಿ ಉತ್ತರ ಕ್ಷೇತ್ರದಿಂದ ಶಾಸಕಿ ಕನೀಝ್ ಫಾತಿಮಾ,ಬೆಳಗಾವಿ ಉತ್ತರದಿಂದ ಆಸೀಫ್ ಸೇಠ್, , ಬೀದರ್ ತ್ರದಿಂದ ರಹೀಮ್ ಖಾನ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕ ರಿಝ್ವಾನ್ ಅರ್ಷದ್, ಶಾಂತಿನಗರದಿಂದ ಶಾಸಕ ಎನ್.ಎ ಹ್ಯಾರಿಸ್, ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕ ಝಮೀರ್ ಅಹ್ಮದ್, ರಾಮನಗರದಿಂದ ಇಕ್ಬಾಲ್ ಹುಸೇನ್, ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಶಾಸಕ ಯು.ಟಿ. ಖಾದರ್, ನರಸಿಂಹರಾಜ ಕ್ಷೇತ್ರದಿಂದ ಶಾಸಕ ತನ್ವೀರ್ ಸೇಠ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.
2018ರ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಗೆ 7 ಮುಸ್ಲಿಮ್ ಶಾಸಕರು ಆಯ್ಕೆಯಾಗಿದ್ದರು. ಈ ಬಾರಿ ಎರಡು ಸ್ಥಾನಗಳು ಹೆಚ್ಚಳವಾಗಿದೆ.
ಬೆಂಗಳೂರು;ರಾಜ್ಯದ ಜನರು ಬದಲಾವಣೆಯನ್ನು ಬಯಸಿ, ಬಿಜೆಪಿ ದುರಾಡಳಿತಕ್ಕೆ ಬೇಸತ್ತು ನಮಗೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ. ಆ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡುತ್ತೇವೆ.ನಾನು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಅನುಮೋದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇದು 7 ಕೋಟಿ ಕನ್ನಡಿಗರ ಗೆಲುವು. ಬರೀ ಕಾಂಗ್ರೆಸ್ ಕಾರ್ಯಕರ್ತರು, ನಾಯಕರ ಗೆಲುವಷ್ಟೇ ಅಲ್ಲ, 7 ಕೋಟಿ ಕನ್ನಡಿಗರ ಗೆಲುವು. ಬಿಜೆಪಿ ಯಾವತ್ತೂ ಜನರ ಆಶೀರ್ವಾದ ಪಡೆದು ಅಧಿಕಾರ ನಡೆಸಲಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಈ ಮೊದಲು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು. ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಆಗಿದೆಯೋ ಆ ಎಲ್ಲಾ ಸಂದರ್ಭಗಳಲ್ಲಿ ಕೂಡ, ಸುಭದ್ರ ಸರ್ಕಾರ ಕೊಡಲಿಕ್ಕೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.