ವಿಟ್ಲ: ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತ ದುರ್ದೈವಿ.
ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.